Search...

ಸಂಭ್ರಮ

ಸಂಭ್ರಮ

ಅನ್ವೇಷಣೆಯೇ ಹೊಸತನಕ್ಕೆ ನಾಂದಿ: ಡಾ.ಎಂ.ಆರ್.ದೊರೆಸ್ವಾಮಿ ಅಭಿಪ್ರಾಯ

ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರವಿದ್ದರು. ಇದೀಗ ಪರಿಸ್ಥಿತಿ ಮೊದಲಿನ ಸ್ಥಿತಿಗೆ ಮರಳುತ್ತಿದ್ದು, ಶೈಕ್ಷಣಿಕ ಸಂಸ್ಥೆಗಳು ಪ್ರತಿಭಾಶೋಧನೆಯಲ್ಲಿ ಕಾರ್ಯನಿರತವಾಗಬೇಕು. ಅನ್ವೇಷಣೆ ನಾಗರೀಕತೆಯ ಹೊಸತನಕ್ಕೆ ನಾಂದಿ ಹಾಡುತ್ತದೆ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದರು.

ನಗರದ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪಯಣದಲ್ಲಿ ನಮ್ಮ ನಾಡಿನ ಸಾಂಸ್ಕೃತಿಕ ಮಹತ್ವವನ್ನು ಅರಿಯುವ ಪ್ರಯತ್ನ ಮಾಡಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತವೆ. ಆದ್ದರಿಂದ ಲಲಿತ ಕಲೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿಯೇ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಸಾಹಿತ್ಯ, ಸಂಗೀತಕ್ಕೆ ಸಂಬಂಧಿಸಿದ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಿಇಎಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜೆ.ಸೂರ್ಯಪ್ರಸಾದ್, ಪಿಇಎಸ್ ವಿಶ್ವವಿದ್ಯಾಲಯದ ಡೀನ್ ಕೃಷ್ಣನ್, ಹನುಮಂತ ನಗರ ಪಿಇಎಸ್ ಕ್ಯಾಂಪಸ್ ನಿರ್ದೇಶಕರಾದ ಎಂ.ವಿ.ಸತ್ಯನಾರಾಯಣ, ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ನಾರಾಯಣರೆಡ್ಡಿ ಪಾಲಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

  • #Event
  • February 21, 2022
  • Viewed - 1744
  • Liked - 3